ಸಬ್ಬತ್‍ದಿನ ಕಳೆದದ್ದೇ ಮಗ್ದಲದ ಮರಿಯಳು, ಯಕೋಬನ ತಾಯಿ ಮರಿಯಳು ಮತ್ತು ಸಲೋಮೆ ಯೇಸುವಿನ ಪಾರ್ಥಿವ ಶರೀರಕ್ಕೆ ಲೇಪಿಸಲೆಂದು ಸುಗಂಧದ್ರವ್ಯಗಳನ್ನು ಕೊಂಡುಕೊಂಡರು.