ದಾನ್ ಕುಲದವರು ತಮ್ಮ ಪ್ರಾಂತ್ಯವನ್ನು ವಿಸ್ತರಿಸುವುದಕ್ಕಾಗಿ ಹೊರಟು ಲೆಷೆಮಿನವರೊಡನೆ ಯುದ್ಧಮಾಡಿ ಜಯಿಸಿದರು. ಆ ಜನರನ್ನು ಕತ್ತಿಯಿಂದ ಸಂಹರಿಸಿ ಅವರ ನಗರವನ್ನು ಸ್ವಾಧೀನಮಾಡಿಕೊಂಡು ಅದರಲ್ಲಿ ವಾಸಿಸಿದರು. ಅಲ್ಲದೆ, ಅದಕ್ಕೆ ತಮ್ಮ ಮೂಲ ಪುರುಷನ ಹೆಸರಾದ ದಾನ್ ಎಂಬ ಹೆಸರನ್ನಿಟ್ಟರು.